ಮಂಗಳೂರು, ಎಪ್ರಿಲ್. 26:-ಮತದಾರರ ಕ್ರಮಬದ್ಧ ಶಿಕ್ಷಣ ಹಾಗೂ ಮತದಾರರು ಚುನಾವಣೆಯಲ್ಲಿ ಭಾಗವಹಿಸುವ ಕಾರ್ಯಕ್ರಮ ಸ್ವೀಪ್(Systamatic
voters education and electorals participation- sveep) ಯೋಜನೆಯಡಿ
ದಕ್ಷಿಣಕನ್ನಡ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯು ಸಮುದಾಯದತ್ತ ಶಾಲೆ ಯೋಜನೆಯಡಿ
ಎಲ್ಲಾ ಶಾಲೆಗಳಲ್ಲಿ 3 ಲಕ್ಷ ಮಕ್ಕಳಿಂದ ಮತದಾರರ ಜಾಗೃತಿ ಕಾರ್ಯಕ್ರಮ
ಹಮ್ಮಿಕೊಳ್ಳಲಾಗಿತ್ತೆಂದು ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ
ನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಯೋಜನೆಯ ಅಧ್ಯಕ್ಷರಾದ ಡಾ.ಕೆ.ವಿ.ವಿಜಯಪ್ರಕಾಶ್ ಅವರು
ತಿಳಿಸಿದ್ದಾರೆ.
ಅವರು ಇಂದು ತಮ್ಮ ಕಚೇರಿಯ ಮಿನಿ ಸಭಾಂಗಣದಲ್ಲಿ ಸ್ವೀಪ್ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದರು.
ನಿರಂತರವಾಗಿ ಕಾರ್ಯ ನಿರ್ವಹಿಸುವ ಕಾರ್ಖಾನೆಗಳಾದ ಎಂಆರ್ ಪಿ ಎಲ್ ,ಎಂಸಿಎಫ್,ಇನ್ನಿತರೆ ಕಾರ್ಖಾನೆಗಳ ಕಾರ್ಮಿಕರಿಗೆ ಮೇ 5 ರ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಮತಿ ನೀಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ 34 ಕಾರ್ಖಾನೆಗಳ 2161 ಕಾರ್ಮಿಕರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲಾಗಿದೆ. 998 ಮಂದಿ ಮತದಾನ ಮಾಡುವ ವಾಗ್ದಾನ ಕೈಗೊಂಡಿದ್ದಾರೆ ಎಂದು ಫ್ಯಾಕ್ಟರೀಸ್ ಆಂಡ್ ಬಾಯ್ಲರ್ಸ್ ಇಲಾಖೆ ಅಧಿಕಾರಿ ಅಧ್ಯಕ್ಷರಿಗೆ ತಿಳಿಸಿದರು.
ಕೃಷಿ, ತೋಟಗಾರಿಕೆ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೆಎಂಎಫ್,ಆರೋಗ್ಯ ಮುಂತಾದ ಇಲಾಖೆಗಳು ಸಹ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವೀಪ್ ಕಾರ್ಯಕ್ರಮ ಮುಖಾಂತರ ಮತದಾರರ ಜಾಗೃತಿ ಉಂಟುಮಾಡಿದೆ ಎಂದು ತಿಳಿಸಿದರು.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸ್ವೀಪ್ ಕಾರ್ಯಕ್ರಮ ಅತ್ಯುತ್ತಮವಾಗಿ ಅನುಷ್ಠಾನವಾಗುತ್ತಿರುವ ಬಗ್ಗೆ ಭಾರತ ಚುನಾವಣಾ ಆಯುಕ್ತರು ಪ್ರಶಂಸೆ ಮಾಡಿದ್ದಾರೆ. ಆದ್ದರಿಂದ ಈ ಬಾರಿ ಜಿಲ್ಲೆಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಮತದಾನ ಆಗುವಂತೆ ಎಲ್ಲರೂ ಕಾಯರ್ೋನ್ಮುಖರಾಗಲು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.
ಸಭೆಯಲ್ಲಿ ಮಹಾನಗರಪಾಲಿಕೆಯ ಆಯುಕ್ತರಾದ ಡಾ. ಹರೀಶ್ ಕುಮಾರ್,ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಮಲ್ಲಿಕಾರ್ಜುನ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮೋಸೆಸ್ ಜಯಶೇಖರ್ ಮುಂತಾದವರು ಹಾಜರಿದ್ದರು.

No comments:
Post a Comment